ʻಯುವನಿಧಿʼ ಯೋಜನೆ ಫಲಾನುಭವಿಗಳೇ ಗಮನಿಸಿ : ʻಸ್ವಯಂ ಘೋಷಣೆ ಪ್ರಮಾಣʼ ಪತ್ರ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಫೆಬ್ರವರಿ 29 ರೊಳಗಾಗಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕೋರಲಾಗಿದೆ.

ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು, ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ 2024ರ ಜನವರಿ ತಿಂಗಳಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆ ಮಾಡಬೇಕಾಗಿರುತ್ತದೆ.

ಪ್ರಸಕ್ತ ಫೆಬ್ರವರಿ 29 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್.ಎಂ.ಎಸ್ ಸಂದೇಶ ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು ವೆಬ್‌ಸೈಟ್  https://sevasindhugs.karnataka.gov.in ನ್ನು ವೀಕ್ಷಿಸಬಹುದು. ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 080-25189112ಗೆ ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ ತಿಳಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read