HomeAgricultureರೈತರಿಗೆ 6 ಸಾವಿರ ರೂ. ನೀಡುವ ಪಿಎಂ-ಕಿಸಾನ್ ಯೋಜನೆ ಫಲಾನುಭವಿಗಳ ಸಂಖ್ಯೆ 8.11 ಕೋಟಿಗೆ ಹೆಚ್ಚಳ

ರೈತರಿಗೆ 6 ಸಾವಿರ ರೂ. ನೀಡುವ ಪಿಎಂ-ಕಿಸಾನ್ ಯೋಜನೆ ಫಲಾನುಭವಿಗಳ ಸಂಖ್ಯೆ 8.11 ಕೋಟಿಗೆ ಹೆಚ್ಚಳ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯು ಕಳೆದ ಹಣಕಾಸು ವರ್ಷದ ಡಿಸೆಂಬರ್-ಮಾರ್ಚ್ 13 ನೇ ಕಂತಿನ ಅವಧಿಯಲ್ಲಿ ಮೊದಲ ಕಂತಿನಲ್ಲಿ 3.16 ಕೋಟಿಯಿಂದ 8.11 ಕೋಟಿಗೆ ಏರಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

ಲಿಖಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಫಲಾನುಭವಿಗಳ ಸಂಖ್ಯೆ ಮೊದಲ ಅವಧಿಯಲ್ಲಿ(ಡಿಸೆಂಬರ್ 2018-ಮಾರ್ಚ್ 2019) 3.16 ಕೋಟಿಯಿಂದ 13 ನೇ ಅವಧಿಯಲ್ಲಿ(ಡಿಸೆಂಬರ್ 2022 – ಮಾರ್ಚ್ 2023) 8.11 ಕೋಟಿಗೆ ಏರಿಕೆಯಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರೀಯ ವಲಯದ ಅತಿದೊಡ್ಡ ಯೋಜನೆಗಳಲ್ಲಿ ಒಂದಾದ ಪಿಎಂಕಿಸಾನ್, ಹೆಚ್ಚಿನ ಆದಾಯದ ಸ್ಥಿತಿಗೆ ಸಂಬಂಧಿಸಿದ ಕೆಲವು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟು ದೇಶದ ಭೂಮಿ ಹೊಂದಿರುವ ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ಯೋಜನೆಯಡಿಯಲ್ಲಿ ವಾರ್ಷಿಕವಾಗಿ 6,000 ರೂ. ಆರ್ಥಿಕ ಲಾಭವನ್ನು ಮೂರು ಸಮಾನ ಕಂತುಗಳಲ್ಲಿ ರೈತರ ಆಧಾರ್-ಸೀಡ್ ಮಾಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಸಚಿವರು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular