ಪದೇ ಪದೇ ಅತ್ಯಾಚಾರ ಎಸಗಿ ಪ್ರತಿ ಬಾರಿ 10 ರೂ. ಕೊಡ್ತಿದ್ದ ಕಾಮುಕ ಅರೆಸ್ಟ್

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ನಲ್ಲಿ ಘಟನೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಒಂದು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 68 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಆರೋಪಿ ಲೈಂಗಿಕ ದೌರ್ಜನ್ಯದ ನಂತರ ಪ್ರತಿ ಬಾರಿ ಸಂತ್ರಸ್ತೆಗೆ 10 ರೂ ನೀಡುತ್ತಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ 5ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ತನ್ನ ತಾಯಿಗೆ ಅಪರಾಧದ ಕಥೆಯನ್ನು ಹೇಳಿದಾಗ ವಿಚಾರ ಬೆಳಕಿಗೆ ಬಂದಿದೆ. ನಂತರ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ಬಾಲಕಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಘಟನೆ ನಡೆದಿವೆ. ಸ್ಥಳೀಯ ನಿವಾಸಿಯಾಗಿರುವ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ಪ್ರತಿ ಬಾರಿ 10 ರೂ. ಕೊಡುತ್ತಿದ್ದ. ಅತ್ಯಾಚಾರದ ಬಗ್ಗೆ ಯಾರಿಗಾದರೂ ಹೇಳಿದರೆ ಕತ್ತು ಹಿಸುಕಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ತಾಯಿಯ ದೂರು ಮತ್ತು ಸಂತ್ರಸ್ತೆಯ ಸಾಕ್ಷ್ಯದ ಆಧಾರದ ಮೇಲೆ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read