ಟಿಎಂಸಿ ಕಾರ್ಯಕರ್ತೆಯ ಭೀಕರ ಹತ್ಯೆ; ಹೊಲದಲ್ಲಿ ಪತ್ತೆಯಾದ ಶವ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕ್ಯಾನಿಂಗ್ ಪಟ್ಟಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಹಿಳಾ ಕಾರ್ಯಕರ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ ಮೃತರನ್ನು 48 ವರ್ಷದ ಸುಚಿತ್ರಾ ಮಂಡಲ್ ಎಂದು ಗುರುತಿಸಲಾಗಿದೆ. ಮೃತಳ ಕುಟುಂಬ ಮತ್ತು ಸ್ಥಳೀಯರು ಹೊಲಕ್ಕೆ ಭೇಟಿ ನೀಡಿದಾಗ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ .

ಮಹಿಳೆಯನ್ನು ಯಾರೋ ಅಪರಿಚಿತರು ಹರಿತವಾದ ಆಯುಧದಿಂದ ಕೊಂದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ನಂತರ ಮೃತದೇಹವನ್ನು ಕ್ಯಾನಿಂಗ್‌ನಲ್ಲಿರುವ ಉಪವಿಭಾಗೀಯ ಆಸ್ಪತ್ರೆಗೆ ತರಲಾಯಿತು. ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸುಚಿತ್ರಾ ಅವರು ದೀರ್ಘಕಾಲದವರೆಗೆ ಟಿಎಂಸಿ ಪಕ್ಷದ ಸಕ್ರಿಯ ಸದಸ್ಯೆಯಾಗಿದ್ದರು. ಕೊಲೆ ಪ್ರಕರಣದ ಹಿಂದಿನ ರಾಜಕೀಯ ವಿಷಯದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read