ಮರುಕಳಿಸಿದ ಶ್ರದ್ಧಾ ವಾಕರ್ ಕೊಲೆ ಕೇಸ್; ಪತ್ನಿ ಕೊಂದು ಪೀಸ್ ಮಾಡಿ ನದಿಗೆಸೆದ ಪತಿ

ದೆಹಲಿಯಲ್ಲಿ ತನ್ನ ಸಂಗಾತಿಯಿಂದ ಹತ್ಯೆಗೀಡಾದ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆಯ ಪ್ರಕರಣ ದೇಶಾದ್ಯಂತ ಬೆಚ್ಚಿಬೀಳಿಸಿದ್ದು, ಆ ಘಟನೆ ಮಾಸುವ ಮುನ್ನವೇ ಪಶ್ಚಿಮ ಬಂಗಾಳದ ಸಿಲಿಗುರಿಯಿಂದ ಅಂತಹುದೇ ಪ್ರಕರಣವು ಮುನ್ನೆಲೆಗೆ ಬಂದಿದೆ.

ಅಕ್ರಮ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಶವವನ್ನು ಎರಡು ತುಂಡು ಮಾಡಿ ಮಹಾನಂದ ನದಿಗೆ ಎಸೆದಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಹಿಳೆಯ ದೇಹದ ಭಾಗಗಳನ್ನು ಪತ್ತೆ ಹಚ್ಚಲು ಶೋಧ ನಡೆಸುತ್ತಿದ್ದಾರೆ.

ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ನಿವಾಸಿ ರೇಣುಕಾ ಖಾತುನ್ ಎಂಬ ಮಹಿಳೆ ಹಲವು ದಿನಗಳಿಂದ ಕಾಣೆಯಾಗಿದ್ದರು. ಆಕೆಯ ಸಂಬಂಧಿಕರು ಡಿಸೆಂಬರ್ ಕೊನೆಯ ವಾರದಲ್ಲಿ ಕಾಣೆಯಾದ ಬಗ್ಗೆ ದೂರು ಸಲ್ಲಿಸಿದ್ದರು.

ದೂರಿನ ಆಧಾರದ ಮೇಲೆ ಸಿಲಿಗುರಿ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ಸಮಯದಲ್ಲಿ, ಪೊಲೀಸರು ರೇಣುಕಾ ಅವರ ಪತಿ ಮೊಹಮ್ಮದ್ ಅನ್ಸಾರುಲ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ಅವನು ತನ್ನ ಹೆಂಡತಿಯನ್ನು ಕೊಂದು ಶವವನ್ನು ಎರಡು ತುಂಡುಗಳಾಗಿ ಕತ್ತರಿಸಿ ನದಿಗೆ ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ.

ಪೊಲೀಸರ ಪ್ರಕಾರ ಅನ್ಸಾರುಲ್ ತನ್ನ ಪತ್ನಿ ವಿವಾಹೇತರ ಸಂಬಂಧದಲ್ಲಿ ಭಾಗಿಯಾಗಿದ್ದಾಳೆಂದು ಶಂಕಿಸಿ ಅವಳನ್ನು ಕೊಲ್ಲಲು ನಿರ್ಧರಿಸಿದ್ದ. ಡಿಸೆಂಬರ್ 24 ರಂದು, ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸುವ ಮೊದಲು ಅನ್ಸಾರುಲ್ ತನ್ನ ಹೆಂಡತಿಯ ಕತ್ತು ಹಿಸುಕಿದ್ದ. ರೇಣುಕಾ ಅವರ ದೇಹದ ತುಂಡುಗಳನ್ನು ಪತ್ತೆ ಹಚ್ಚಲು ಡೈವರ್‌ಗಳ ನೆರವಿನೊಂದಿಗೆ ಶೋಧ ನಡೆಸಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read