ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ. ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಪಾರ್ಟ್ ಮೆಂಟ್ ನಿವಾಸಿಯಿಂದಲೇ ಈ ಕೃತ್ಯ ನಡೆದಿದ್ದು, ಬಾಲಕಿಯನ್ನು ಪುಸಲಾಯಿಸಿ ಕಾಮುಕ ಆಕೆಯ ಮೈ-ಕೈ, ಅಂಗಾಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ. ಘಟನೆ ಬಗ್ಗೆ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ.
ಅಪಾರ್ಟ್ ಮೆಂಟ್ ನ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಕೃತ್ಯ ಬಯಲಾಗಿದೆ. ಬಾಲಕಿಯ ತಾಯಿ ಕುಂಬಳಗೋಡು ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿ, ಜೈಲಿಗಟ್ಟಿದ್ದಾರೆ.