ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಟಿಅರ್ ಸ್ಫೋಟಗೊಂಡ ಘಟನೆ ನಡೆದಿದೆ.
ಬೊಮ್ಮನಹಳ್ಳಿಯ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಕಾರಿನ ಟೈರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಸ್ಥಳೀಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
