HomeLatest NewsBIG NEWS: ಬೆಂಗಳೂರಿನಲ್ಲಿ ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್: 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

BIG NEWS: ಬೆಂಗಳೂರಿನಲ್ಲಿ ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್: 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ವಿದೇಶಿ ಡ್ರಗ್ ಪೆಡ್ಲರ್ ಓರ್ವನನ್ನು ಬಂಧಿಸಿದ್ದಾರೆ.

ಆಫ್ರಿಕನ್ ಪ್ರಜೆ ಡೇನಿಯಲ್ ಅರಿಂಜೆ ಒಕ್ವೊಶಾ ಬಂಧಿತ ಆರೋಪಿ. ಬೆಂಗಳೂರಿನ ಹೊರವಲಯದ ಸೋಲದೇವನಹಳ್ಳಿಯಲ್ಲಿ ಮನೆ ಮಾಡಿಕೊಂಡು ಡ್ರಗ್ ಡೀಲ್ ಮಾಡುತ್ತಿದ್ದ. 2023ರಲ್ಲಿ ವ್ಯಾಪಾರಿ ವೀಸಾ ಮೇಲೆ ಬೆಂಗಳೂರಿಗೆ ಆಗಮಿಸಿ ಸೋಲದೇವನಹಳ್ಳಿಯಲ್ಲಿ ತನ್ನ ಸ್ನೇಹಿತನ ಜೊತೆಗೆ ಬಾಡಿಗೆ ಫ್ಲಾಟ್ ನಲ್ಲಿ ವಾಸವಾಗಿದ್ದ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಮನೆ ಮೇಲೆ ದಾಳಿ ನಡೆಸಿ ಒಕ್ವೊಶಾನನ್ನು ಬಂಧಿಸಿದ್ದಾರೆ. ಆತನ ಸ್ನೇಹಿತ ತಪ್ಪಿಸಿಕೊಂಡಿದ್ದಾನೆ. ಬಂಧಿತನಿಂದ 4 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular