HomeLatest NewsBREAKING: ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ

BREAKING: ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ

ಚೆನ್ನೈ: ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ರಾಜ್ಯದ ಗಡಿ ಭಾಗದ ತಮಿಳುನಾಡಿನ ಪೆರಂಡಪಲ್ಲಿಯಲ್ಲಿ ನಡೆದಿದೆ.

ಬೆಂಗಳೂರು-ಚೆನ್ನೈ ರಾಷ್ಟ್ರ‍ೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ನಾಲ್ಕು ಕಾರುಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ. ಹಲವರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೇನ್ ಗಳ ಮೂಲಕ ಕಾರುಗಳನ್ನು ತೆರವು ಮಾಡಲಾಗುತ್ತಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular