HomeLatest NewsBIG NEWS: ಬೆಂಗಳೂರಿನಲ್ಲಿ ಇಬ್ಬರು ಮಹಿಳೆಯರು ಸೇರಿ ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢ!

BIG NEWS: ಬೆಂಗಳೂರಿನಲ್ಲಿ ಇಬ್ಬರು ಮಹಿಳೆಯರು ಸೇರಿ ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿದೆ. ಮತ್ತೆ ಮೂವರಲ್ಲಿ ಸೋಂಕು ದೃಢವಾಗಿದೆ.

ನಿನ್ನೆ ಮಲ್ಲೇಶ್ವರಂ ಹಾಗೂ ರಾಜಾಜಿನಗರದ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇಂದು ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.

ಡಿಜೆಹಳ್ಳಿ, ಸಿವಿರಾಮನ್ ನಗರ ಹಾಗೂ ಜೈ ಭುವನೇಶ್ವರಿ ನಗರದ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಮೂವರಿಗೂ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ. ಆದಾಗ್ಯೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮೂವರನ್ನೂ ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ನಿಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular