HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಪೊಲೀಸರು ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

ಸಂಜಯ್ (21) ಬಂಧಿತ ಯುವಕ. ದಾಸರಹಳ್ಳಿಯ ಕೆಂಪೇಗೌಡ ಉದ್ಯಾನವನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ ಬಳಿ ಇದ್ದ 2ಕೆಜಿಗೂ ಅಧಿಕ ಗಾಂಜಾ ಜಪ್ತಿ ಮಡಲಾಗಿದೆ.

ಆರೋಪಿ ಚಿಕ್ಕ ಕವರ್ ನಲ್ಲಿ ಪ್ಯಾಕ್ ಮಾಡಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಕೆಂಪೇಗೌಡ ಉದ್ಯಾನವನದಲ್ಲಿ ಮಾರಾಟ ಮಾಡುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular