HomeLatest NewsBREAKING: ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು:...

BREAKING: ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಮಹಾರಾಷ್ಟ್ರದ ಎಎನ್ ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್, ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂಬ ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು. 1 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು ಪತ್ತೆಯಾಗಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಪೊಲೀಸರು ಮಾತ್ರ ಆ ದಾಳಿಯಲ್ಲಿ ಇರಲಿಲ್ಲ. ನಮ್ಮ ಪೊಲೀಸರು ಇದ್ದರು. ಬೆಂಗಳೂರು ಪೊಲೀಸರು, ಡಿಸಿಪಿಗಳು ಕೂಡ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು, ದಾಳಿ ವೇಳೆ 1 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತುಗಳು ಪತ್ತೆಯಾಗಿವೆ ಎಂದರು. ಇನ್ನು ಹೊಸ ವರ್ಷಾಚಾರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದು, ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular