BREAKING : ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ : 100 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು.!

ಬೆಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದ 100ಕ್ಕೂ ಹೆಚ್ಚು ವಾಹನಗಳು ಅಗ್ನಿಗಾಹುತಿಯಾಗಿವೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ ನಲ್ಲಿ ಪಾರ್ಕ್ ಮಾಡಿದ್ದರು.

ಐದು ಕಾರು, ಐದು ಆಟೋ, ಇತರ ವಾಹನಗಳು 80ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿವೆ. ಮೈದಾನದಲ್ಲಿ ಹುಲ್ಲುಗಿಡ ಬೆಳೆದುಕೊಂಡಿತ್ತು, ಯಾರೋ ಸಿಗರೇಟ್ ಗಾಗಿ ಬೆಂಕಿ ಕಡ್ಡಿ ಗೀರಿ ಎಸೆದಿದ್ದು, ಇದರಿಂದ ಈ ಅವಘಡ ಸಂಭವಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read