HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಕಟ್ಟಡ ಹೊತ್ತಿ ಉರಿದಿದೆ.

ಬೆಂಗಳೂರಿನ ಬೊಮ್ಮಸಂದ್ರದ ಗಾರ್ಮೆಂಟ್ಸ್ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಗೋದಾಮಿನಲ್ಲಿ ಬಟ್ಟೆ, ಲೆದರ್, ಕೆಮಿಕಲ್ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular