HomeLatest NewsBIG NEWS: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

BIG NEWS: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಬೆಂಗಳೂರು: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ವಿವೇಕ ನಗರದಲ್ಲಿ ನಡೆದಿದೆ.

ಬೆಂಕಿ ಹಚ್ಚಿದ ಆರೋಪಿಯನ್ನು ಸುಬ್ರಮಣಿ ಎಂದು ಗುರುತಿಸಲಾಗಿದೆ. ವೆಂಕಟರಮಣಿ ಎಂಬುವವರ ಬಳಿ ಆರೋಪಿಯ ಸಹೋದರಿ ಪಾರ್ವತಿ ತನ್ನ ಮಗಳ ಮದುವೆಗಾಗಿ ೫ ಲಕ್ಷ ಸಾಲ ಪಡೆದುಕೊಂಡಿದ್ದರಂತೆ. ಹಲವು ವರ್ಷಗಳು ಕಳೆದರೂ ಸಾಲ ತೀರಿಸಿಲ್ಲ. ಇದರಿಂದ ವೆಂಕಟರಮಣಿ ತಾನು ಕೊಟ್ಟ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದಾರೆ.

ಹಣ ಕೇಳಿದ್ದಕ್ಕೆ ಮಹಿಳೆ ಪಾರ್ವತಿ ಹಾಗೂ ಆಕೆಯ ಮಗಳು ವೆಂಕಟರಮಣಿ ಬಳಿ ಜಗಳವಾಡಿದ್ದಾರೆ. ಇದೇ ವಿಚಾರವಾಗಿ ಸಿಟ್ಟಾದ ಸುಬ್ರಮಣಿ, ವೆಂಕಟರಮಣಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ವೆಂಕಟರಮಣಿ ಪುತ್ರ ವಿವೇಕ್ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular