ಬೆಂಗಳೂರು: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ನಿನ್ನೆ ರಾತ್ರಿ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಏಕಾಏಕಿ ಮನೆಗೆ ನುಗ್ಗಿದ್ದ ಮೂವರು ಕುಡಿದ ಮತ್ತಿನಲ್ಲಿ ಹೇಯ ಕೃತ್ಯವೆಸಗಿ ಪರಾರಿಯಾಗಿದ್ದಾರೆ.
ಮಹಿಳೆ ನೀಡಿದ ದೂರಿನ ಹಿನೆಲೆಯಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ.