ಬೆಂಗಳೂರು ಸೇರಿದಂತೆ ವಿವಿಧೆಡೆ ಹೀಟ್ ಸ್ಟ್ರೋಕ್ : ಈ ಬಾರಿ ಸಾವು-ನೋವು ಹೆಚ್ಚಳ: ವರದಿ ಬಹಿರಂಗ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ರಣಬಿಸಿಲು ಶುರುವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ನಡುವೆ ಆಘಾತಕಾರು ವರದಿಯೊಂದು ಬಹಿರಂಗವಾಗಿದೆ.

ಈ ಬಾರಿ ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಬಿಸಿಗಳಿ ಬೀಸಲಿದ್ದು, ಹೋಟ್ ಸ್ಟ್ರೋಕ್ ಅಥವಾ ಉಷ್ಣಾಘಾತದಿಂದ ಸಾವು-ನೋವಿ ಹೆಚ್ಚಾಗಲಿದೆ ಎಂದು ತಿಳಿಸಿದೆ.

ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗಲಿದೆ. ಅಷ್ಣ ಅಲೆಗಳನ್ನು ತಡೆಗಟ್ಟಲು ತಕ್ಷಣ ಉಪಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಇಲ್ಲವಾದಲ್ಲಿ ಉಷ್ಣ ಅಲೆಯಿಂದಾಗಿ ಸಾವು-ನೋವು ಹೆಚ್ಚಳವಾಗಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

ಕಿಂಗ್ಸ್ ಕಾಲೇಜ್ ಲಂಡನ್, ಹಾರ್ವರ್ಡ್ ವಿಶ್ವವಿದ್ಯಾಲಯ, ಪ್ರಿನ್ಸ್ ಟನ್ ವಿಶ್ವವಿದ್ಯಾಲಯ, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಬರ್ಕ್ಲಿಯ ವಿಶ್ವವಿದ್ಯಾಲಯ ಅಧ್ಯಯನ ಸಂಶೋಧಕರು ಜಂಟಿಯಾಗಿ ನಡೆಸಿದ ಅಧ್ಯಯನ ವರದಿ ತಿಳಿಸಲಾಗಿದೆ.

2011ರ ಜನಗಣಿ ಪ್ರಕಾರ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಂಗಳೂರು, ದೆಹಲಿ, ಫರೀದಾಬಾದ್, ಗ್ವಾಲಿಯರ್, ಕೋಟ, ಲುಧಿಯಾನ, ಮೂರತ್, ಸೂರತ್ ಸೇರಿದಂತೆ ಹಲವು ನಗರಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಳವಾಗಲಿದ್ದು, ಉಷ್ಣಾಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read