ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆರಾತ್ರಿ ಇಡಿ ಸುರುದ ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಇದರ ಬೆನ್ನಲ್ಲೇ ಮತ್ತಷ್ಟು ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ 11 ಸೆಂ.ಮೀಯಿಂದ 20 ಸೆಂ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ನಗರದ ಹಲವೆಡೆ ಗುಡುಗುಸಹಿತ ಮಳೆಯಾಗಲಿದೆ. ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಗಂಟೆಗೆ 30-40 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.
ಇನ್ನು ಹಲವೆಡೆ ತಾತ್ಕಾಲಿಕ ವಿದ್ಯುತ್ ವ್ಯತ್ಯಯವುಂಟಾಗಲಿದೆ. ಬಿರುಗಾಳಿ, ಗುಡುಗು, ಮಳೆ ಹಿನ್ನೆಲೆಯಲ್ಲಿ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.