HomeLatest NewsBREAKING NEWS: ಗುಡುಗು ಸಹಿತ ಭಾರಿ ಮಳೆ: ಬೆಂಗಳೂರಿನಲ್ಲಿ ಮತ್ತೆ ಅಬ್ಬರಿಸಿ ಬೊಬ್ಬಿರಿದ ವರುಣ

BREAKING NEWS: ಗುಡುಗು ಸಹಿತ ಭಾರಿ ಮಳೆ: ಬೆಂಗಳೂರಿನಲ್ಲಿ ಮತ್ತೆ ಅಬ್ಬರಿಸಿ ಬೊಬ್ಬಿರಿದ ವರುಣ

ಬೆಂಗಳೂರು: ಈಗಾಗಲೇ ವರುಣಾರ್ಭಟಕ್ಕೆ ತತ್ತರುಸಿದ್ಧ ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಮಧ್ಯಾಹ್ನದ ಬಳಿಕ ನಗರಾದ್ಯಂತ ವರುಣ ಅಬ್ಬರಿಸಿ ಬೊಬ್ಬರಿದಿದ್ದಾನೆ.

ಬೆಂಗಳೂರಿನಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಮನೆಗಳಲ್ಲಿ, ಬಡಾವಣೆಗಳಲ್ಲಿ ಇಂದು ಮಧ್ಯಾಹ್ನದಷ್ಟೊತ್ತಿಗೆ ನಿಂತ ನೀರನ್ನು ಹೊರ ಹಾಕುವ ಕೆಲಸವನ್ನು ಒಂದೆಡೆ ಬಿಬಿಎಂಪಿ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದರು. ಅಲ್ಲದೇ ಮಳೆ ನೀರಿನಿಂದ ಆವೃತಗೊಂಡಿರುವ ನಿವಾಸಿಗಳ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿರುವಾಗಲೇ ಮತ್ತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲಿ ನೋಡಿದರಲ್ಲಿ ನೀರು ತುಂಬಿದ್ದು, ರಸ್ತೆಗಳಲ್ಲಿ ಪ್ರವಾಹದಂತೆ ನೀರು ಉಕ್ಕಿ ಹರಿಯುತ್ತಿದೆ. ಒಂದೆಡೆ ವಿದ್ಯುತ್ ಕಡಿತಗೊಂಡಿದ್ದು, ಮತ್ತೊಂದೆಡೆಗೆ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದಾಗಿ ಬೆಂಗಳೂರಿಗರು ಹೈರಣಾಗಿದ್ದು, ಕತ್ತಲ ಜೊತೆಗೆ ರ್ರಾತ್ರಿಯಿಡಿ ಮತ್ತೆ ಗುಡುಗು, ಇಂಚು ಸಹಿತ ಮಳೆ ಜೋರಾಗುವ ಸಾಧ್ಯತೆ ದಟ್ಟವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular