HomeLatest NewsBREAKING: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

BREAKING: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳೆಲ್ಲ ಜಲಾವೃತಗೊಂಡು ನದಿಯಾಂತಾಗಿ ಮಾರ್ಪಟ್ಟಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆ ಗುಡುಗು ಸಹಿತ ಏಕಾಏಕಿ ಮಳೆ ಅಬ್ಬರಿಸಿದ್ದು, ಧಾರಾಕಾರ ಮಳೆಗೆ ಗುಂಡಿಮಯ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿದೆ.

ರಸ್ತೆಗಳು ಜಲಾವೃತಗೊಂಡಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬೆಂಗಳೂರಿನ ಮೆಜೆಸ್ಟಿಕ್, ವಿಧಾನಸೌಧ, ಕಾರ್ಪೊರೇಷನ್, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆ.ಆರ್.ಮಾರುಕಟ್ಟೆ, ಮಲ್ಲೇಶ್ವರಂ , ರಾಜಾಜಿನಗರ, ವಿಜಯನಗರ, ಎಲೆಕ್ಟ್ರಾನಿಕ್ ಸಿಟಿ, ಮೈಸೂರು ರಸ್ತೆ, ಗಿರಿನಗರ, ಹೊಸಕೆರೆಹಳ್ಳಿ, ಬನಶಂಕರಿ, ಜಯನಗರ, ಜೆಪಿ ನಗರ, ನೈಸ್ ರಸ್ತೆ, ನಾಯಂಡಹಳ್ಳಿ, ಕೆಂಗೇರಿ, ಆರ್.ಆರ್,ನಗರ, ಬಸವೇಶ್ವರನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular