ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಹೋಟೆಲ್ ಒಂದರಲ್ಲಿ ಕನ್ನಡಿಗರಿಗೆ ಅಪಮಾನವಾಗುವಂತಹ ಡಿಸ್ ಪ್ಲೇ ಪ್ರಕಟಿಸಿದ ಪ್ರಕರಣ ಸಂಬಂಧ ಇಬ್ಬರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದ ಜಿಎಸ್ ಸೂಟ್ಸ್ ಹೋಟೆಲ್ ನಲ್ಲಿ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಡಿಸ್ ಪ್ಲೇನಲ್ಲಿ ಪ್ರದರ್ಶಿಸಲಾಗಿತ್ತು. ನಿನ್ನೆ ರಾತ್ರಿ ಹೋಟೆಲ್ ನ ಡಿಸ್ ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಬರಹ ಹಾಕಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಹೋಟೆಲ್ ಗೆ ಮಡಿವಾಳ ಠಾಣೆ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೇ ಡಿಸ್ ಪ್ಲೇ ವಶಕ್ಕೆ ಪಡೆದಿದ್ದರು.
ಇದೀಗ ಮಡಿವಾಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಮ್ಶದ್, ಸರ್ಫರಾಜ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಡಿವಾಳ ಸಬ್ ಇನ್ಸ್ ಪೆಕ್ಟರ್ ರಮೇಶ್ ಹೂಗಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.