ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರಗ ಮಹೋತ್ಸವಕ್ಕೆ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ನಿನ್ನೆ ಎಡಿಸಿ ಖಾತೆಗೆ ಹಣ ಹೋಗಿದೆ. ಅವರೇ ಕರಗ ಮಹೋತ್ಸವದ ಖರ್ಚು, ವೆಚ್ಚ ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಪ್ರತಿವರ್ಷ ಪಾಲಿಕೆ ಕರಗಕ್ಕೆ ಹಣ ಬಿಡುಗಡೆ ಮಾಡುತ್ತದೆ. ಅನುದಾನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.