HomeKarnatakaBIG NEWS: ಬೆಂಗಳೂರು ಕರಗ ಮಹೋತ್ಸವ: ನಿನ್ನೆಯೇ ಹಣ ಬಿಡುಗಡೆಯಾಗಿ ಖಾತೆಗೆ ಹೋಗಿದೆ: ಸಚಿವ ರಾಮಲಿಂಗಾರೆಡ್ಡಿ...

BIG NEWS: ಬೆಂಗಳೂರು ಕರಗ ಮಹೋತ್ಸವ: ನಿನ್ನೆಯೇ ಹಣ ಬಿಡುಗಡೆಯಾಗಿ ಖಾತೆಗೆ ಹೋಗಿದೆ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರಗ ಮಹೋತ್ಸವಕ್ಕೆ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ನಿನ್ನೆ ಎಡಿಸಿ ಖಾತೆಗೆ ಹಣ ಹೋಗಿದೆ. ಅವರೇ ಕರಗ ಮಹೋತ್ಸವದ ಖರ್ಚು, ವೆಚ್ಚ ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಪ್ರತಿವರ್ಷ ಪಾಲಿಕೆ ಕರಗಕ್ಕೆ ಹಣ ಬಿಡುಗಡೆ ಮಾಡುತ್ತದೆ. ಅನುದಾನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular