ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಏಪ್ರಿಲ್ 22ರ ಬಳಿಕ ರಾಜ್ಯಾದ್ಯಂತ ಹೆಚ್ಚು ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿದ್ದು, ಮೋಡಕವಿದ ವಾತಾವರಣವಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.