ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಮುಂದಿನ ಮೂರು ಗಂಟೆಗಳ ಕಾಲ ಧಾರಾಕಾರ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಈಗಾಗಲೇ ಕೋರಮಂಗಲ, ಆಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್, ಆರ್.ಆರ್.ನಗರ, ಮೈಸೂರು ರಸ್ತೆ, ಗಿರಿನಗರ, ನಾಯಂಡಹಳ್ಳಿ, ಮೆಜೆಸ್ಟಿಕ್, ಶಾಂತಿನಗರ, ಕೆ.ಆರ್.ಮಾರುಕಟ್ಟೆ, ರಿಚ್ಮಂಡ್ ಸರ್ಕಲ್, ವಿಜಯನಗರ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ.