ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ವಿದ್ಯುತ್ ವ್ಯತ್ಯಯ, ನೀರು ಪೂರೈಕೆಯಲ್ಲಿ ಸಮಸ್ಯೆಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೇ ಇದೀಗ ಜಲಮಂಡಳಿ ಮತ್ತೊಂದು ಶಾಕ್ ನೀಡಿದೆ. ಮೂರು ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನೀರು ಸಂಗ್ರಹಿಸಿಕೊಳ್ಳುವಂತೆ ಸೂಚನೆ ನೀಡಿದೆ.
ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ.
ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳಲ್ಲಿ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಹಾಗೂ 17ರಂದು ಸ್ಥಗಿತಗೊಳಿಸಲಾಗುತ್ತದೆ.
ಕಾವೇರಿ 5ನೇ ಹಂತ ಸೆಪ್ಟೆಂಬರ್.15ರಿಂದ ಬೆಳಿಗ್ಗೆ 1 ರಿಂದ ಸೆಪ್ಟೆಂಬರ್ೆ.17ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳ ಕಾಲ
ಕಾವೇರಿ 1, 2, 3, 4,ರಲ್ಲಿ ಸೆಪ್ಟೆಂಬರ್ 16ರ ಬೆಳಿಗ್ಗೆ 6ರಿಂದ ಸೆಪ್ಟೆಂಬರ್ 17ರ ಬೆಳಿಗ್ಗೆ 6ರವರೆಗೆ ಒಟ್ಟು 24 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ವಿ.ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದಾರೆ.