ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಯೋರ್ವ ಹಾಡಹಗಲೇ ಮಹಿಳೆಗೆ ನಡುರಸ್ತೆಯಲ್ಲಿ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ರೇಖಾ ಎಂಬ ಮಹಿಳೆಗೆ ದುಷ್ಕರ್ಮಿ ಚಾಕು ಇರಿದಿದ್ದಾನೆ. ಬಸ್ ನಿಲ್ದಾಣದಲ್ಲಿ ನಿಂತಿದ್ದ ರೇಖಾ ಎಂಬುವವರ ಜೊತೆ ಲೋಕೇಶ್ ಎಂಬಾತ ಮಾತಿಗೆ ಮಾತು ಬೆಳೆಸಿ ಜಗಳವಾಡಿದ್ದಾನೆ. ಇಬ್ಬರ ನಡುವೆ ಗಲಾಟೆಯಾಗಿದೆ. ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ತಿಳಿದುಬಂದಿಲ್ಲ.
ಈ ವೇಳೆ ಲೋಕೇಶ್ ಏಕಾಏಕಿ ರೇಖಾಗೆ ಚಾಕು ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಹಲ್ಲೆಗೊಳಗಾದ ರೇಖಾ ಅವರನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.