ತುಮಕೂರು: ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸಂಭ್ರಹ್ಮಣ್ಯಕ್ಕೆ ಹೊಸ ರೈಲು ಸಂಚಾರ ಆರಂಭವಾಗಲಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಘೋಷಿಸಿದ್ದಾರೆ.
ತುಮಕೂರಿನಲ್ಲಿ ರೈಲ್ವೆ ಮೇಲ್ಸೇತುವೆ ಗುದ್ದಲಿ ಪೂಜೆ ಬಳಿಕ ಮಾತನಾಡಿದ ಸಚಿವ ವಿ.ಸೋಮಣ್ಣ, ಮೇ 12ರಿಂದ ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಹೊಸ ರೈಲು ಸಂಚಾರ ಆರಂಭವಾಗಲಿದೆ ಎಂದರು.
ದಿನಕ್ಕೆ ನಾಲ್ಕು ಬಾರಿ ಈ ರೈಲು ಬೆಂಗಳೂರು-ಕುಕ್ಕೆ ನಡುವೆ ಸಂಚರಿಸಲಿದೆ. ಇದರಿಂದ ಪ್ರಯಾಣಿಕರಿಗೆ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.