ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈಓವರ್ ನಿಂದ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ವ್ಯಕ್ತಿಯೋರ್ವ ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. 35-40 ವರ್ಷದೊಳಗಿನ ವ್ಯಕ್ತಿ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
