ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿ ಅವಾಂತರಗಳು ಸೃಷ್ಟಿಯಾಗಿವೆ. ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಕಡಬ ತಾಲೂಕಿನ ಮಣ್ಣುಗುಂಡಿ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಗುಂಡ ಕುಸಿತ ಸಂಭವಿಸಿದೆ. ಪರಿಣಾಮ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಬಸ್, ಲಾರಿ, ಟ್ರಕ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಕಾರು, ಬೈಕ್ ಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ.
ಇನ್ನು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸಲು ಯಾವುದೇ ಅಡಚಣೆ ಇಲ್ಲ ಎಂದು ಎಸ್ ಪಿ ಡಾ. ಅರುಣ್ ಮಾಹಿತಿ ನೀಡಿದ್ದಾರೆ.