ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ವೃದ್ಧೆಯನ್ನು ಹತ್ಯೆಗೈದು ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಶ್ರೀಲಕ್ಷ್ಮೀ ಕೊಲೆಯಾಗಿರುವ ಮಹಿಳೆ. ಶ್ರೀಲಕ್ಷ್ಮೀ ಪತಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಶ್ರೀಲಕ್ಷ್ಮೀ ಒಬ್ಬರೇ ವಾಸವಾಗಿದ್ದರು.. ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆಗೈದು ಕತ್ತಿನಲ್ಲಿದ್ದ ಮಾಂಗಲ್ಯ ಸರ, ಕಿವಿಯೋಲೆ, ಮೂಗುತಿ, ಕೈಯಲ್ಲಿದ್ದ ಬಳೆಗಳನ್ನು ದೋಚಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಬಾಡಿಗೆದಾರರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
