ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಪಟಾಕಿ ಅವಘಡದಲ್ಲಿ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯ, ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದೆ.
15 ವರ್ಷದ ಮೂವರು ಮಕ್ಕಳು ಪಟಾಕಿ ಸಿಡಿತದಿಂದ ಗಾಯಗೊಂಡಿದ್ದು, ಅವರನ್ನು ನಾರಾಯಣ ನೇತ್ರಾಲಯಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಇನ್ನಿಬ್ಬರನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ. ಕಣ್ಣಿನ ದೃಷ್ಟಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.