HomeLatest NewsBIG NEWS: ಬೆಂಗಳೂರಿನಲ್ಲಿ ಪಟಾಕಿ ಅವಘಡ: ಐವರು ಗಾಯ; ಆಸ್ಪತ್ರೆಗೆ ದಾಖಲು

BIG NEWS: ಬೆಂಗಳೂರಿನಲ್ಲಿ ಪಟಾಕಿ ಅವಘಡ: ಐವರು ಗಾಯ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಪಟಾಕಿ ಅವಘಡದಲ್ಲಿ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯ, ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದೆ.

15 ವರ್ಷದ ಮೂವರು ಮಕ್ಕಳು ಪಟಾಕಿ ಸಿಡಿತದಿಂದ ಗಾಯಗೊಂಡಿದ್ದು, ಅವರನ್ನು ನಾರಾಯಣ ನೇತ್ರಾಲಯಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಇನ್ನಿಬ್ಬರನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ. ಕಣ್ಣಿನ ದೃಷ್ಟಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular