ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಶಾಂತಿನಗರ ಸಂಪೂರ್ಣ ಜಲಾವೃತಗೊಂಡಿದೆ. ಸಿಸಿಬಿ ಕಚೇರಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕಚೇರಿಯ ಆವರಣ ಕೆರೆಯಂತಾಗಿದೆ. ಕಚೇರಿ ಮುಂಭಾಗದ ರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿದೆ.
ಕಚೇರಿ ಮುಂಭಾಗ ಫುಲ್ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಶಾಂತಿನಗರದ ಬಸ್ ಡಿಪೋ ಸಂಪೂರ್ಣ ಜಲಾವೃತಗೊಂಡಿದೆ. ಡಿಪೋದಲ್ಲಿದ್ದ ಹಲವು ಬಿಎಂಟಿಸಿ ಬಸ್ ಗಳು ಭಾಗಶಃ ಮುಳುಗಿವೆ. ಡಿಪೋದಿಂದ ಬಸ್ ಹೊರತರಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನ ಬಹುತೇಕ ರಸ್ತೆಗಳು, ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.