ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ನಗರದಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಏಲೆ ಮರ ಮುರಿದು ಬಿದ್ದ ಘಟನೆ ನಡೆದಿದೆ.
ಅರಮನೆ ಮೈದಾನದ ಮುಂಭಾಗದ ರಸ್ತೆ ಪ್ಯಾಲೇಸ್ ಗುಟ್ಟಹಳ್ಳಿ ಬಳಿ ಚಲಿಸುತ್ತಿದ್ದ ಬಸ್ ಮೇಲೆ ಏಕಾಏಕಿ ಮರ ಮುರಿದು ಬಿದ್ದಿದೆ. ದೊಡ್ಡಬಳ್ಳಾಪುರ-ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಕೆ.ಎಸ್.ಆರ್ .ಸಿ ಬಸ್ ಮೇಲೆ ಮರವೊಂದು ಬಿದ್ದಿದೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ರತರಿ ಸುರಿದ ಧಾರಾಕಾರ ಮಳೆಯೆ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಈ ನಡುವೆ ಇಂದು ಮಧ್ಯಾಹ್ನಾನದ ಬಳಿಕ ಗುಡುಗು, ಮಿಂಚು ಸಹಿತ ಬೆಂಗಳುರು ನಗರಾದಾದ್ಯಂರ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.