HomeLatest NewsBREAKING: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಗುಂಡಿಮಯ ರಸ್ತೆಗಳು ಜಲಾವೃತ: ವಾಹನ ಸವಾರರ ಪರದಾಟ

BREAKING: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಗುಂಡಿಮಯ ರಸ್ತೆಗಳು ಜಲಾವೃತ: ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ನೀರು ನಿಂತು ಅವಾಂತರಗಳು ಸೃಷ್ಟಿಯಾಗಿವೆ.

ಬೆಳಿಗ್ಗೆಯಿಂದ ಆಗಾಗ ಬಿಸಿಲು, ಮತ್ತೆ ಮೋಡಕವಿದ ವಾತಾವರಣದಂತಿದ್ದ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಮತ್ತದೇ ಅವಾಂತರ ಸೃಷ್ಟಿಯಾಗಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದ್ದು, ಜನರು ಪರದಾಡುವಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಜೆಸ್ಟಿಕ್, ಕಾರ್ಪೊರೇಷನ್, ವಿಧಾನಸೌಧ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಗಿರಿನಗರ, ವಿಜಯನಗರ, ಮಲ್ಲೇಶ್ವರಂ, ರಾಜಾಜಿನಗರ, ಬಸವನಗುಡಿ, ಬನಶಂಕರಿ, ಜೆಪಿ ನಗರ, ಆರ್.ಆರ್.ನಗರ, ಜಯನಗರ, ಪದ್ಮನಾಭನಗರ, ಹೊಸಕೆರೆಹಳ್ಳಿ, ವೈಟ್ ಫೀಲ್ಡ್, ಮೈಸೂರು ರಸ್ತೆ, ನಾಯಂಡಹಳ್ಳಿ, ಕೆಂಗೇರಿ, ಕೆ.ಆರ್ ಮಾರುಕಟ್ಟೆ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ.

ಒಂದೆಡೆ ಭಾರಿ ಮಳೆ, ಮತ್ತೊಂದೆಡೆ ಗುಂಡಿಮಯ ರಸ್ತೆಗಳಲ್ಲಿ ತುಂಬಿ ಹರಿಯುತ್ತಿರುವ ನೀರಿನಿಂದಾಗಿ ಕಚೇರಿ ಕೆಲಸಗಳನ್ನು ಮುಗಿಸಿ ಮನೆಯತ್ತ ಸಾಗುವ ವಾಹನಸವಾರರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular