HomeLatest NewsRAIN ALERT: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ಹಲವು ಜಿಲ್ಲೆಗಳಲ್ಲಿ ಒಣಹವೆ; ಇನ್ನು ಕೆಲವೆಡೆ ಮಂಜು...

RAIN ALERT: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ಹಲವು ಜಿಲ್ಲೆಗಳಲ್ಲಿ ಒಣಹವೆ; ಇನ್ನು ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣ ಹವೆ ಇದ್ದರೆ ಮತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ.

ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿಜಿಟಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಮಳೆ ರಗಳೆಗೆ ಜನರು ಜನರು ಹೈರಾಣಾಗುತ್ತಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ, ಮೆಜೆಸ್ಟಿಕ್, ಶಾಂತಿನಗರ, ಯಶವಂತಪುರ, ಆರ್.ಆರ್.ನಗರ, ಕೆಂಗೇರಿ, ಗಿರಿನಗರ, ಹೊಸಕೆರೆಹಳ್ಳಿ, ಉತ್ತರಹಳ್ಳಿ, ವಿಜಯನಗರ, ಜಯನಗರ, ಬನಶಂಕರಿ, ಮೈಸೂರು ರಸ್ತೆ ಹಾಗೂ ಸುತ್ತಮುತ್ತಲು ಜಿಟಿ ಜಿಟಿ ಮಳೆಯಾಗುತ್ತಿದ್ದು, ಜೊತೆಗೆ ಮೈಕೊರೆವ ಚಳಿ ಪ್ರಮಾಣವೂ ಹೆಚ್ಚಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ದಟ್ಟವಾದ ಮೋಡಕವಿದ ವಾತಾವರಣ, ಮಂಜು ಇದ್ದು, ಮೈ ಕೊರೆವ ಚಳಿ ಹೆಚ್ಚಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular