ಬೆಂಗಳೂರು: ಬೆಂಗಳೂರಿನ ಡೇರಿ ಸರ್ಕಲ್ ಬಳಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಸಿಬ್ಬಂದಿ ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ದರೋಡೆ ಪ್ರಕರಣದ ಹಣ ರಿಕವರಿ ಮಾಡಲಾಗಿದೆ. ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ಓರ್ವ ಪೊಲೀಸ್ ಕಾನ್ಸ್ ಟೇಬಲ್ ಎಂದು ತಿಳಿಸಿದರು.
ದರೋಡೆಯಾದ 7.11 ಕೋಟಿ ಹಣದಲ್ಲಿ 6.29 ಕೋಟಿ ಹಣ ಸಿಕ್ಕಿದೆ. ಉಳಿದ ಹಣದ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸರು ತಾಂತ್ರಿಕವಾಗಿ ಹಾಗೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಆರೋಪಿಗಳು ಬಳಸಿದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದರು. ಪೊಲೀಸ್ ಇಲಾಖೆ ಇನ್ಮುಂದೆ ಇನ್ನಷ್ಟು ಎಚ್ಚರಿಕೆಯಿಂದ ಇರಲಿದೆ ಎಂದು ಹೇಳಿದರು.
