ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, 6.30 ಕೋಟಿ ಹಣ ಜಪ್ತಿ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲೇಸರ್ ಮಾಹಿತಿ ನೀಡಿದ್ದಾರೆ. ಹೈದರಾಬಾದ್ ನಲ್ಲಿ ನಿನ್ನೆ ಸಂಜೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 53 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದಾಪುರ ಠಾಣೆಗೆ ಬಂದು ಶರಣಾಗಿದ್ದಾನೆ ಎಂದರು.
ಪ್ರಕರಣದಲ್ಲಿ ಈವರೆಗೆ 6.30 ಕೋಟಿ ಹಣ ಜಪ್ತಿ ಮಾಡಲಾಗಿದೆ. ಉಳಿದ ಹಣವನ್ನು ಶೀಘ್ರದಲ್ಲಿಯೇ ವಶಪಡಿಸಿಕೊಳ್ಳಲಾಗುವುದು. ತಲೆ ಮರೆಸಿಕೊಂಡಿರುವವರಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ತಿಳಿಸಿದರು.
