ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆ ಪ್ರಕರಣದ ತನಿಖೆ ವೇಳೆ ಪಾಳು ಬಿದ್ದ ಮನೆಯಲ್ಲಿ 5.56 ಕೋಟಿ ಹಣ ಪತ್ತೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಪಾಳು ಬಿದ್ದ ಮನೆಯಲ್ಲಿ ಬರೋಬ್ಬರಿ 5.56 ಕೋಟಿ ಹಣ ಪತ್ತೆಯಾಗಿದೆ. ತನಿಖೆ ವೇಳೆ ಅನುಮಾನಗೊಂಡ ಪೊಲೀಸರು ಪಾಳು ಬಿದ್ದ ಮನೆಯ ಬಾಗಿಲು ಒಡೆದು, ಒಳಗೆ ಹೋಗಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
