HomeLatest NewsBREAKING: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣ: ಪಾಳು ಬಿದ್ದ ಮನೆಯಲ್ಲಿ ಕಂತೆ ಕಂತೆ ಹಣ...

BREAKING: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಪ್ರಕರಣ: ಪಾಳು ಬಿದ್ದ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆ ಪ್ರಕರಣದ ತನಿಖೆ ವೇಳೆ ಪಾಳು ಬಿದ್ದ ಮನೆಯಲ್ಲಿ 5.56 ಕೋಟಿ ಹಣ ಪತ್ತೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಪಾಳು ಬಿದ್ದ ಮನೆಯಲ್ಲಿ ಬರೋಬ್ಬರಿ 5.56 ಕೋಟಿ ಹಣ ಪತ್ತೆಯಾಗಿದೆ. ತನಿಖೆ ವೇಳೆ ಅನುಮಾನಗೊಂಡ ಪೊಲೀಸರು ಪಾಳು ಬಿದ್ದ ಮನೆಯ ಬಾಗಿಲು ಒಡೆದು, ಒಳಗೆ ಹೋಗಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular