ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೈದರಾಬಾದ್ ನ ಲಾಡ್ಜ್ ನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 70 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಡೇರಿ ಸರ್ಕಲ್ ಬಳಿ ನಡೆದಿದ್ದ 7.11 ಕೋಟಿ ದರೋಡೆ ಪ್ರಕರಣದಲ್ಲಿ ಈವರೆಗೆ ಪೊಲೀಸರು 6.45 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ಸದ್ಯ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದು, ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
