HomeLatest NewsBREAKING: ಬೆಂಗಳೂರಿನಲ್ಲಿ ಹಾಡಹಗಲೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

BREAKING: ಬೆಂಗಳೂರಿನಲ್ಲಿ ಹಾಡಹಗಲೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಾಂಪುರದಲ್ಲಿ ನಡೆದಿದೆ.

ಶ್ರೀರಾಂಪುರ ರೈಲ್ವೆ ಟ್ರಾಕ್ ಬಳಿ ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಸೀಳಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಿದ್ಯಾರ್ಥಿನಿಯನ್ನು ಬೈಕ್ ನಲ್ಲಿ ಕರೆದುಕೊಂಡು ಬಂದು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿ ಯಾರು? ಕೊಲೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular