ಬೆಂಗಳೂರು: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಕಾಲೇಜಿನಲ್ಲಿಯೇ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸಿನಿಯರ್ ವಿದ್ಯಾರ್ಥಿನಿ ಮೇಲೆ ಜ್ಯೂನಿಯರ್ ವಿದ್ಯಾರ್ಥಿ ಅಟ್ಟಹಾಸ ಮೆರೆದಿದ್ದಾನೆ. ಕಾಲೇಜಿನ ವಾಶ್ ರೂಂ ಗೆ ಎಳೆದೊಯ್ದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಲಾಗಿದೆ.
ಪ್ರಕರಣ ಸಂಬಂಧ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿ ಇಬರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.