HomeLatest NewsBREAKING: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆ

BREAKING: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆ

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಅರ್ಚಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಶ್ವತ್ಥನಾರಾಯಣ ಆತ್ಮಹತ್ಯೆಗೆ ಶರಣಾಗಿರುವ ಅರ್ಚಕ. ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಶ್ವತ್ಥನಾರಾಯಣ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular