ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೋರ್ವ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಚಿಕ್ಕಬಾಣಾವರದ ಡಿ ಎಕ್ಸ್ ಸ್ಮಾಅರ್ಟ್ ನೆಸ್ಟ್ ಅಪಾರ್ಟ್ ಮೆಂಟ್ ನಲ್ಲಿ ಟೆಕ್ಕಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಪ್ರಶಾಂತ್ ನಾಯರ್ (40) ಆತ್ಮಹತ್ಯೆ ಮಾಡಿಕೊಂಡಿರುವ ಟೆಕ್ಕಿ.
12 ವರ್ಷಗಳ ಹಿಂದೆ ಪ್ರಶಾಂತ್ ನಾಯರ್ ಪೂಜಾ ಎಂಬಾಕೆಯನ್ನು ವಿವಾಹವಾಗಿದ್ದರು. ದಂಪತಿಗೆ 8 ವರ್ಷದ ಮಗಳಿದೆ. ಪೂಜಾ ಕೂಡ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಪತಿ-ಪತ್ನಿ ನಡುವೆ ಭಿನ್ನಾಭಿಪ್ರಾಯದಿಂದಾಗಿ ಇಬ್ಬರೂ ವಿಚ್ಛೇದನ ಪಡೆದಿದ್ದರು ಎನ್ನಲಾಗಿದೆ.
ವಿಚ್ಛೇದನದ ಬಳಿಕ ಪ್ರಶಾಂತ್ ನಾಯರ್ ಮಾನಸಿಕವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಗೆ ಹಲವು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಅವರ ತಂದೆ ಮನೆಗೆ ಬಂದು ನೋಡಿದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.