ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ದೀಪಾಂಜಲಿ ನಗರದ ರೈಲ್ವೆ ಟ್ರ್ಯಾಕ್ ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಶವದ ಗುರುತು ಸಿಕ್ಕಿಲ್ಲ.
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ತನಿಖೆ ನಡೆಸಿದ್ದಾರೆ.