BIG NEWS: ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಎರಡು ನೂತನ ರೈಲು ನಿಲ್ದಾಣಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿರುವ ರೈಲು ನಿಲ್ದಾಣಗಳಲ್ಲಿನ ಪ್ರಯಾಣಿಕರ ದಟ್ಟಣೆ ಕಡಿಮೆ ಮಡುವ ನಿಟ್ಟಿನಲ್ಲಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೆ ಇಲಾಖೆ ಬೆಂಗಳೂರಿನಲ್ಲಿ ಹೊಸದಾಗಿ ಎರಡು ರೈಲ್ವೆ ಟರ್ಮಿನಲ್ ನಿರ್ಮಾಣ ಮಾಡಲು ಸಿದ್ದತೆ ನಡೆಸಿದೆ.

ಬೆಂಗಳೂರು ಹೊರವಲಯದಲ್ಲಿ ಎರಡು ರೈಲ್ವೆ ಟರ್ಮಿನಲ್​ಗಳನ್ನು ತೆರೆಯಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮಾದರಿಯಲ್ಲಿ ಎರಡು ಹೊಸ ರೈಲ್ವೆ ಟರ್ಮಿನಲ್​ಗಳನ್ನು ನಿರ್ಮಾಣ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನೆಲಮಂಗಲ, ಚಿಕ್ಕಬಳ್ಳಾಪುರ ಜಿಲ್ಲೆಯ ದೇವನಹಳ್ಳಿಯಲ್ಲಿ ಹೊಸದಾಗಿ ರೈಲ್ವೆ ನಿಲ್ದಾಣ ನಿರ್ಮಣ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಹೊಸ ರೈಲ್ವೆ ನಿಲ್ದಾಣ ಕಾಮಗಾರಿಗೆ ತಯಾರಿ ಆರಂಭವಾಗಿದೆ. 800 ಎಕರೆ ಪ್ರದೇಶದಲ್ಲಿ ರೈಲ್ವೆ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು. ಸದ್ಯ ಅಧಿಕಾರಿಗಳಿಂದ ಜಾಗ ಗುರುತಿಸುವ ಕೆಲಸ ಆಗಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಕೂಡ ಇದಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ. ಜನ ದಟ್ಟಣೆ ತಪ್ಪಿಸುವಲ್ಲಿ ಈ ಟರ್ಮಿನಲ್​ಗಳು ಸಹಕಾರಿಯಾಗಲಿವೆ ಎಂದರು.

ಟ್ರಾಫಿಕ್ ತಜ್ಞರು ಮಾತನಾಡಿ, ಬೆಂಗಳೂರು ಹೊರವಲಯದಲ್ಲಿ ಎರಡು ಹೊಸ ರೈಲು ನಿಲ್ದಾಣ ನಿರ್ಮಾಣದಿಂದ ನಗರದಲ್ಲಿನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ವಾಹನ ಸಂಚಾರ ಸುಗಮವಾಗಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read