ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂಟಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿರುವ ಮನೆಯಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. 47 ವರ್ಷದ ಲತಾ ಮೃತ ಮಹಿಳೆ. ಹೋಲ್ ಸೇಲ್ ಬಟ್ಟೆ ವ್ಯಾಪಾರಿ ಪ್ರಕಾಶ್ ಎಂಬುವವರ ಪತ್ನಿ ಲತಾ.
ದುಷ್ಕರ್ಮಿ ಮನೆಗೆ ನುಗ್ಗಿ ಮಹಿಳೆಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಮಹಿಳೆಯನ್ನು ಹತ್ಯೆಗೈದು ಮನೆಯಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕಾಟನ್ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.