HomeLatest NewsBREAKING: ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ: ಮಾತುಕತೆಗೆಂದು ಕರೆದು ಯುವಕನ ಕೊಲೆ

BREAKING: ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ: ಮಾತುಕತೆಗೆಂದು ಕರೆದು ಯುವಕನ ಕೊಲೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ ಪ್ರಕರಣ ನಡೆದಿದೆ. ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದು ಪರಾರಿಯಾಗಿರುವ ಘಟನೆ ಜೆ.ಜೆ.ನಗರದಲ್ಲಿ ನಡೆದಿದೆ.

ಜೆ.ಜೆ. ನಗರದ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ವಿಜಯ್ (26) ಕೊಲೆಯಾದ ಯುವಕ. ವಿಜಯ್ ನಿನ್ನೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ವಿಜಯ್ ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆ.ಜೆ.ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular